ತಿರುವನಂತಪುರ, ಅ. 10 (DaijiworldNews/HR) : ಶಬರಿಮಲೆ ಅಯ್ಯಪ್ಪ ದೇಗುಲ ಅ.16ರಿಂದ ಐದು ದಿನಗಳ ತೆರೆಯಲಿದ್ದು, ಕೊರೊನಾ ಕಾರಣದಿಂದ ಒಂದು ಬಾರಿ 250 ಮಂದಿ ಭಕ್ತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.
ಐದು ದಿನ ನಡೆಯುವ ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಸೇರಿದಂತೆ ಅಗತ್ಯ ಇರುವ ಎಲ್ಲಾ ಸಿದ್ದತೆಗಳನ್ನು ಪೂರ್ತಿಗೊಳಿಸಲಾಗಿದೆ. ಮತ್ತು ಕೇರಳ ಸಶಸ್ತ್ರ ಪೊಲೀಸ್ ಪಡೆಯ ಐದನೇ ಬೆಟಾಲಿಯನ್ ಕಮಾಂಡೆಂಟ್ ಕೆ. ರಾಧಾಕೃಷ್ಣನ್ ಶುಕ್ರವಾರ ದೇಗುಲಕ್ಕೆ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದ್ದಾರೆ.
ಇನ್ನು ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳು ನೀಲಕ್ಕಲ್ ಕ್ಯಾಂಪ್ ನಲ್ಲಿ ರ್ಯಾಪಿಡ್ ಕೊರೊನಾ ಪರೀಕ್ಷೆ ಮಾಡಿಸಿ, ಅಲ್ಲಿ ನೆಗೆಟಿವ್ ಬಂದರೆ ಮಾತ್ರ ಶಬರಿಮಲೆಗೆ ತೆರಳಲು ಅವಕಾಶ ಕಲ್ಪಿಸಲಾಗಿದೆ.