ಬೆಂಗಳೂರು, ಅ. 10 (DaijiworldNews/MB) : ನನ್ನನ್ನು ಇತರೆ ಪಕ್ಷಗಳು ಸಂಪರ್ಕಿಸಿವೆ ಎಂಬುದು ಕಾಲ್ಪನಿಕ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.
ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರುತ್ತಾರೆ ಎಂಬ ವರದಿಯಾದ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಿ ಎಂ.ಬಿ ಪಾಟೀಲ್ ಅವರು ಟ್ವೀಟ್ ಮಾಡಿದ್ದಾರೆ.
ನನ್ನನ್ನು ಇತರೆ ಪಕ್ಷಗಳು ಸಂಪರ್ಕಿಸಿವೆ ಎಂಬ ಕಾಲ್ಪನಿಕ ವರದಿಯನ್ನು ಇತ್ತೀಚಿಗೆ ಮಾಧ್ಯಮದಲ್ಲಿ ನಾನು ಗಮನಿಸಿದ್ದೇನೆ. ಈ ವರದಿ ಸಂಪೂರ್ಣವಾಗಿ ಆಧಾರರಹಿತ ಹಾಗೂ ಸತ್ಯಕ್ಕೆ ದೂರವಾದದ್ದು ಎಂದು ತಿಳಿಸಿದ್ದಾರೆ.