ಬೆಂಗಳೂರು,ಅ. 10 (DaijiworldNews/HR) : ಛಾಪಾ ಕಾಗದಗಳನ್ನು ನಕಲಿ ಮಾಡಿ ಮುದ್ರಿಸಿ ಮಾರಾಟ ಮಾಡುತ್ತಿದ್ದ ಆರೋಪದದಲ್ಲಿ ಇಬ್ಬರನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವಿವೇಕನಗರದ ಹಸ್ಸೈನ್ ಮೋದಿ ಬಾಬು (53) ಹಾಗೂ ಬಸವೇಶ್ವರ ನಗರ ನಿವಾಸಿ ಹರೀಶ್ (55) ಹಸೈನ್ ಮೋದಿ ಅಲಿಯಾಸ್ ಛೋಟಾ ತೆಲಗಿ, ಶವರ್ ಅಲಿಯಾಸ್ ಸೀಮಾ ಹಾಗೂ ನಜ್ಮಾ ಫಾತಿಮಾ ಎಂಫ಼ು ಗುರುತಿಸಲಾಗಿದೆ.
ಅರೋಪಿಗಳು ಎಸ್ಪಿ ರಸ್ತೆಯಲ್ಲಿರುವ ಅಂಗಡಿಯಲ್ಲಿ ನಕಲಿ ಛಾಪಾ ಕಾಗದ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಗಿದ್ದು, 2.71 ಕೋಟಿ ಮೌಲ್ಯದ 443 ಛಾಪಾ ಕಾಗದಗಳನ್ನು ಜಪ್ತಿ ಮಾಡಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದರು.
2002ನೇ ಸಾಲಿನಲ್ಲಿ ನಿಷೇಧಿಸಿದ್ದ ಈ ನಕಲಿ ಛಾಪಾ ಕಾಗದಗಳನ್ನು ಬಳಸಿ ನೋಂದಣಿ ಅಥವಾ ಒಪ್ಪಂದ ಮಾಡಿಕೊಂಡಿರುವ ದಾಖಲೆಗಳನ್ನು ಸೃಷ್ಟಿಸಿ ಮೋಸ ಮಾಡುತ್ತಿದ್ದರು. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.