ಬೆಂಗಳೂರು, ಅ. 10(DaijiworldNews/PY): ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಸ್ವತಃ ಅವರೇ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮಸ್ಕಾರಗಳು, ಆತ್ಮಿಯರೇ, ಇಂದು ಕೊರೊನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ. ಚಿಕಿತ್ಸೆ ಕಾರಣ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ.ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಚಿಕಿತ್ಸೆಗೆ ಒಳಪಡಬೇಕೆಂದು ವಿನಂತಿ. ಧನ್ಯವಾದಗಳು ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯರು ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎನ್. ರವಿಕುಮಾರ್ ಅವರು ಶೀಘ್ರವಾಗಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ತಮ್ಮ ಎಂದಿನ ಕರ್ತವ್ಯಗಳಿಗೆ ಮರಳಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮೂಲ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಆರೋಗ್ಯ ಸಚಿವ ಶ್ರೀರಾಮುಲು ಅವರು ಕೂಡಾ ಟ್ವೀಟ್ ಮಾಡಿದ್ದು, ಆತ್ಮೀಯರು, ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಎನ್.ರವಿ ಕುಮಾರ್ ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಸಾರ್ವಜನಿಕ ಜೀವನದಲ್ಲಿ ಸದಾ ಚಟುವಟಿಕೆಯಿಂದ ಇರುವ ಅವರು ಬೇಗ ಗುಣಮುಖರಾಗಿ ತಮ್ಮ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.