ಬೆಂಗಳೂರು, ಅ. 11 (DaijiworldNews/PY): ಕಳೆದ ವಾರದಿಂದ ಕೊರೊನಾ ದೃಢಪಟ್ಟು ಹೋಂ ಐಸೋಲೇಷನ್ನಲ್ಲಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮೂಲತ ತಿಳಿಸಿದ್ದು, ಕಳೆದ ಸೋಮವಾರದಿಂದ ನಾನು ಕೋವಿಡ್ 19 ವೈರಸ್ ಪೀಡಿತನಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ. ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದೇನೆ. ವೈದ್ಯರ ನಿಗಾದಲ್ಲಿದ್ದೇನೆ ಎಂದಿದ್ದಾರೆ.
ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ರೀತಿಯಿಂದಲೂ ನನ್ನ ಆರೋಗ್ಯ ಸುಧಾರಿಸುತ್ತಿದೆ ಎಂದು ತಿಳಿಸಿದ್ದಾರೆ.