ನವದೆಹಲಿ, ಅ. 11 (DaijiworldNews/PY): ಹತ್ರಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಯುಪಿ ಪೊಲೀಸರ ವಿರುದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್, ನಾಚಿಕೆಗೇಡಿನ ಸತ್ಯವೆಂದರೆ, ಅನೇಕ ಭಾರತೀಯರು ದಲಿತರು, ಮುಸ್ಲಿಮರು ಹಾಗೂ ಬುಡಕಟ್ಟು ಜನಾಂಗದವರನ್ನು ಮನುಷ್ಯರೆಂದು ಪರಿಗಣಿಸುವುದಿಲ್ಲ. ಸಿಎಂ ಹಾಗೂ ಪೊಲೀಸರು ಯಾರ ಮೇಲೂ ಅತ್ಯಾಚಾರವಾಗಿಲ್ಲ ಎಂದು ಹೇಳುತ್ತಿದ್ದಾರೆ. ಏಕೆಂದರೆ, ಅವರಿಗೆ ಹಾಗೂ ಇತರ ಅನೇಕ ಭಾರತೀಯರಿಗೆ ಆಕೆ ಏನೇನೂ ಅಲ್ಲ ಎಂದು ತಿಳಿಸಿದ್ದಾರೆ.
ಹತ್ರಸ್ನಲ್ಲಿ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಸೆಪ್ಟೆಂಬರ್ನಲ್ಲಿ ಸಂತ್ರಸ್ತೆ ದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು.