ಶಿವಮೊಗ್ಗ, ಅ. 11 (DaijiworldNews/PY): ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ತಪಾಸಣೆ ಮಾಡಲಾಗಿತ್ತು. ಕಾಗೋಡು ಅವರು ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ರ್ಯಾಪಿಡ್ ಟೆಸ್ಟ್ ಮಾಡಿಸಿಕೊಂಡಿದ್ದು, ಈ ವೇಳೆ ಕೊರೊನಾ ಸೊಂಕು ಕಾಣಿಸಿಕೊಂಡಿದೆ.
ಸದ್ಯ ಕಾಗೋಡು ತಿಮ್ಮಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ನಮ್ಮ ಪ್ರೀತಿಯ ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಶೀಘ್ರವೇ ಅವರು ಚೇತರಿಸಿಕೊಳ್ಳಲಿ ಎಂದು ಯು.ಟಿ.ಖಾದರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.