ಬೆಂಗಳೂರು, ಅ.11 (DaijiworldNews/PY): ಅ.12ರಿಂದ 30ರವರೆಗೆ ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ನೀಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.
ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಮತ್ತು ವಿದ್ಯಾಗಮ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.ಹಲವಾರು ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿರುವುದರಿಂದ ಮತ್ತು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ದಿನಾಂಕ 12-10-2020 ರಿಂದ 30-10-2020 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿಸಲು ಮುಖ್ಯಮಂತ್ರಿ ಬಿಎಸ್ವೈ ಆದೇಶಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಟ್ವೀಟ್ ಮೂಲಕ ತಿಳಿಸಿದೆ.
ಕೊರೊನಾ ಹಿನ್ನೆಲೆ ಸದ್ಯ ಶಾಲೆಗಳನ್ನು ಆರಂಭಿಸದಿರಲು ಹಾಗೂ ವಿದ್ಯಾಗಮ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವಂತೆ ಸಿಎಂ ಈಗಾಗಾಲೇ ಆದೇಶ ನೀಡಿದ್ದಾರೆ.
ಶಿಕ್ಷಕರ ಮಧ್ಯಂತರ ರಜೆಯನ್ನು ಕಡಿತಗೊಳಿಸಿದ್ದ ಕಾರಣ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ದ ಕಿಡಿಕಾರಿದ್ದರು.