ಬೆಂಗಳೂರು, ಅ. 12 (DaijiworldNews/MB) : ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಬೆಳವಣಿಗೆಯಲ್ಲಿ ಬಿ ಶ್ರೀರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ಡಾ. ಸುಧಾಕರ್ ಕೆ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಸಚಿವ ಬಿ ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆ ಜವಾಬ್ದಾರಿಯನ್ನು ನೀಡಲಾಗಿದೆ.
ಈ ಹಿಂದೆ ಗೋವಿಂದ ಕಾರಜೋಳ ಅವರು ಸಮಾಜ ಕಲ್ಯಾಣ ಸಚಿವರಾಗಿದ್ದರು. ಇದೀಗ ಡಿಸಿಎಂ ಅವರ ಬಳಿ ಕೇವಲ ಲೋಕೋಪಯೋಗಿ ಇಲಾಖೆ ಜವಬ್ದಾರಿ ಮಾತ್ರ ಉಳಿದಿದೆ.
ಇನ್ನು ಶ್ರೀರಾಮುಲು ಅವರು ಹಲವು ದಿನಗಳಿಂದ ಖಾತೆ ಬದಲಾವಣೆ ಮಾಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದ್ದರು ಎಂದು ಹೇಳಿದ್ದರು.