ಶ್ರೀನಗರ,ಅ. 12 (DaijiworldNews/HR): ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ಪಡೆದ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ ಸಿಆರ್ ಪಿಎಫ್ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಭದ್ರತಾಪಡೆಗಳು ಉಗ್ರರು ಅಡಗಿ ಕುಳಿತಿದ್ದ ಪ್ರದೇಶವನ್ನು ಸುತ್ತುವರೆದಿದ್ದರಿಂದ ತಪ್ಪಿಸಿಕೊಳ್ಳಲು ಯಾವುದೇ ಮಾರ್ಗಗಳು ಸಿಗದ ಕಾರಣ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಬಳಿಕ ಚುರುಕುಗೊಂಡ ಸೇನಾಪಡೆ ಇಬ್ಬರು ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದು ಬಂದಿದೆ.