ಹಿಮಾಚಲ ಪ್ರದೇಶ, ಅ. 12 (DaijiworldNews/PY): ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮೂಲಕ ತಿಳಿಸಿರುವ ಅವರು, ಕಳೆದ ದಿನಗಳ ಹಿಂದೆ ಕೊರೊನಾ ದೃಢಪಟ್ಟ ವ್ಯಕ್ತಿಯೊಂದಿಗಿನ ಸಂಪರ್ಕದಿಂದಾಗಿ, ಕಳೆದ ಒಂದು ವಾರ ನಾನು ಹೋಂ ಕ್ವಾರಂಟೈನ್ನಲ್ಲಿದೆ. ಇದೀಗ ಕೊರೊನಾದ ಲಕ್ಷಣಗಳು ಕಾಣಿಸಿಕೊಂಡಿದ್ದು, ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ಪರೀಕ್ಷಾ ವರದಿಯಲ್ಲಿ ಕೊರೊನಾ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ವೈದ್ಯರ ಸಲಹೆಯ ಮೇರೆಗೆ ನಾನು ಹೋಂ ಕ್ವಾರಂಟೈನ್ಲ್ಲಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಹೇಳಿದ್ದಾರೆ.