ಬೆಂಗಳೂರು, ಅ. 13 (DaijiworldNews/MB) : ಪಕ್ಷ ವಿರೋಧಿ ಚಟುವಟಿಕೆಗಳು ನಡೆಯುತ್ತಿದೆ ಎಂಬ ಕಾರಣಕ್ಕಾಗಿ ಕೇರಳದ ಜೆಡಿಎಸ್ ಘಟಕವನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ವಿಸರ್ಜಿಸಿದ್ದಾರೆ.
ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಅವರು, ಕೇರಳದ ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಪರಾಗಿರುವ ಸಿಕೆ ನಾಣು ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದು ಈ ಬಗ್ಗೆ ಉತ್ತರಿಸುವಂತೆ ನೋಟಿಸ್ ನೀಡಲಾಗಿದ್ದು ಆದರೆ ಇದಕ್ಕೆ ಅವರು ಪ್ರತಿಕ್ರಿಯೆ ನೀಡಿಲ್ಲ. ಈ ಕಾರಣದಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಹಾಗೆಯೇ ಸಚಿವ ಮ್ಯಾಥ್ಯು ಟಿ ಥಾಮಸ್ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಘಟಕವನ್ನು ಬಲಪಡಿಸುವ ಹೊರತಾಗಿ ಸಿ ಕೆ ನಾಣು ಅವರು ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಪಕ್ಷವನ್ನು ಅಸ್ಥಿರಗೊಳಿಸುವ ಯತ್ನ ಮಾಡಿದ್ದು ಪಕ್ಷ ರಚಿಸಿದ ಪ್ರಮುಖ ಸಮಿತಿಗಳನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.
ಸೆ.24ರಂದು ಕೇರಳದ ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಪರಾಗಿರುವ ಸಿಕೆ ನಾಣು ಅವರಿಗೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿರುವ ಬಿಎಂ ಫಾರೂಖ್ ಅವರು ಈ ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದರು. ಈ ನೋಟಿಸ್ಗೆ ಯಾವುದೇ ಉತ್ತರ ನೀಡದ ನಾಣು ಯಾವುದೇ ನಿರ್ದೇಶನವನ್ನು ಪಾಲಿಸುತ್ತಿರಲಿಲ್ಲ ಎಂದು ಹೇಳಲಾಗಿದೆ.