ಶ್ರೀನಗರ,ಅ. 13 (DaijiworldNews/HR): ಜಮ್ಮು-ಕಾಶ್ಮೀರದಲ್ಲಿ ಮತ್ತೆ ಚೀನಾ ಸರ್ಕಾರದ ನೆರವಿನೊಂದಿಗೆ 370ನೇ ವಿಧಿಯನ್ನು ಸ್ಥಾಪಿಸಲಾಗುವುದು ಎಂಬುದಾಗಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಎಲ್ಲಿಯೂ ಹೇಳಿಲ್ಲ ಎಂದು ಎನ್ಸಿ ಸ್ಪಷ್ಟಪಡಿಸಿದೆ.
2019ರಲ್ಲಿ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನದ 370ನೇ ವಿಧಿಯನ್ನು ರದ್ದುಮಾಡಿತ್ತು.
ಈ ಕುರಿತು ಸುದ್ದಿವಾಹಿನಿಯ ಸಂದರ್ಶನವೊಂದರಲ್ಲಿ ಫಾರೂಕ್ ಅಬ್ದುಲ್ಲಾ ಅವರು ಚೀನಾ ಸರ್ಕಾರದ ಸಹಕಾರದಲ್ಲಿ ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿಯನ್ನು ಸ್ಥಾಪಿಸುವ ಬಗ್ಗೆ ಮಾತನಾಡಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ.
ಇನ್ನು ನಮ್ಮ ನಾಯಕರ ಹೇಳಿಕೆಯನ್ನು ತಿರುಚಲಾಗಿದ್ದು ಬಿಜೆಪಿ ಆರೋಪ ಮಾಡಿರುವಂತೆ ಮತ್ತ 370ನೇ ವಿಧಿಯನ್ನು ಸ್ಥಾಪಿಸಲಾಗುವುದು ಎಂದು ಅವರು ಎಲ್ಲಿಯೂ ಹೇಳಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಸ್ಪಷ್ಟಪಡಿಸಿದೆ.