ಬೆಂಗಳೂರು,ಅ. 13 (DaijiworldNews/HR): ಮೈತ್ರಿ ಸರ್ಕಾರಕ್ಕೆ ಯಾರೆಲ್ಲಾ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದಿದ್ದಾರೆಯೋ ಅವರ ಋಣ ತೀರಿಸುವ ಜವಾಬ್ದಾರಿ ಬಿಜೆಪಿಯದ್ದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್ ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ, ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇವೆ ಮುನಿರತ್ನ ಅಕ್ರಮ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹವಾಗಿದೆ ಎಂದರು.
ಇನ್ನು ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 2020-21ನೇ ಸಾಲಿಗೆ 44.86 ಲಕ್ಷ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಲಾಗಿದ್ದು, ಈ ವರ್ಷ 8.34 ಲಕ್ಷ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ 3ರಡಿ ಕರ್ನಾಟಕ ರಾಜ್ಯಕ್ಕೆ ಒಟ್ಟು 5612.50 ಕಿ. ಮೀ ಹಂಚಿಕೆ ಮಾಡಲಾಗಿದೆ ಎಂದು ಈ ವೇಳೆ ತಿಳಿಸಿದ್ದಾರೆ.