ಲಕ್ನೋ, ಅ. 15 (DaijiworldNews/PY): ಉತ್ತರ ಪ್ರದೇಶದ ಮಾಜಿ ಸಿಎಂ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರಿಗೆ ಕೊರೊನಾ ದೃಢಪಟ್ಟಿದೆ.
ಸಮಾಜವಾದಿ ಪಕ್ಷದ ಟ್ವಿಟರ್ ಖಾತೆ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದು, ವೈದ್ಯರ ತಂಡ ಮುಲಾಯಂ ಸಿಂಗ್ ಅವರ ಆರೋಗ್ಯದ ತಪಾಸಣೆ ಮಾಡುತ್ತಿದ್ದಾರೆ. ಅವರಿಗೆ ಕೊರೊನಾಕ್ಕೆ ಸಂಬಂಧಿಸಿದ ಯಾವುದೇ ಲಕ್ಷಣಗಳು ಕಾಣಿಸಿಲ್ಲ ಎಂದು ಹೇಳಿದೆ.
ವೈದ್ಯಕೀಯ ತಪಾಸಣೆಯಲ್ಲಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಮಾಹಿತಿ ತಿಳಿಯುತ್ತಿದ್ದಂತೆ ಅವರನ್ನು ಗುರುಗಾವ್ನ ಮೇದಾಂತ್ ಆಸ್ಪತ್ರೆಗೆ ದಾಖಲಿಸಲಾಗಿದೆ.