ಶಿರಾ, ಅ. 15 (DaijiworldNews/PY): ಶಾಸಕ ಡಾ.ಜಿ.ಪರಮೇಶ್ವರ ಅವರು ಹಿಂದೆ ಉಪ ಮುಖ್ಯಮಂತ್ರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದವರು. ಅವರು ಈ ಯಾವುದೇ ದಾಖಲೆಗಳಿಲ್ಲದೇ ಆರೋಪ ಮಾಡುವುದ ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಮೇಶ್ವರ ಅವರು ಯಾವ ಸರ್ಕಾರದ ಅವಧಿಯ ವೇಳೆ ಎಷ್ಟು ಅಧಿಕಾರಿಗಳು ವರ್ಗಾವಣೆಯಾಗಿದ್ದಾರೆ ಎನ್ನುವ ವಿಚಾರವಾಗಿ ಮಾಹಿತಿ ಇಟ್ಟುಕೊಂಡು ಮಾತನಾಡಬೇಕು. ಬದಲಾಗಿ ಯಾವುದೇ ದಾಖಲೆಗಳಿಲ್ಲದೆ, ನಿರಾಧಾರವಾಗಿ ಆರೋಪ ಮಾಡುವುದು ಸರಿಯಲ್ಲ. ಅವರು ಉಪ ಮುಖ್ಯಮಂತ್ರಿಯಂತ ಜವಾಬ್ದಾರಿಯುತ ಸ್ಥಾನವನ್ನು ನಿರ್ವಹಿಸಿದವರು. ಅವರು ಈ ರೀತಿಯಾಗಿ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ.
ಸರ್ಕಾರದ ವಿರುದ್ದ ಆರೋಪ ಮಾಡಿರುವ ಪರಮೇಶ್ವರ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರು ಬಿಜೆಪಿಯದ್ದು, ಪರ್ಸೆಂಟೇಜ್ ಸರ್ಕಾರ ಎಂದು ಹೇಳಿದ್ದರು.