ಬೆಂಗಳೂರು, ಅ.15 (DaijiworldNews/HR): ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಕಾಂಗ್ರೆಸ್ ನಿಂದ ಉಚ್ಚಾಟನೆ ಮಾಡುವಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಆಗ್ರಹಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ ಮೂರ್ತಿ, ಮಾಜಿ ಮೇಯರ್ ಸಂಪತ್ ರಾಜ್ ರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಜಮೀರ್ ಅಹ್ಮದ್ ಬಳಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಯಾರೇ ಆಗಲಿ ಅಪರಾಧಿ ಆಗಿದ್ದರೂ ಶಿಕ್ಷೆ ಕೊಡಬೇಕು. ನಾನು ಯಾರ ಜೊತೆಗೂ ದ್ವೇಷದ ರಾಜಕಾರಣ ಮಾಡಿಲ್ಲ. ಗಲಭೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದು, ಯಾರು ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮವಾಗಲೇಬೇಕು ಎಂದು ಒತ್ತಾಯಿಸಿದ್ದಾರೆ.