ತುಮಕೂರು, ಅ. 15 (DaijiworldNews/PY): ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ ಸರ್ಕಾದ ಆಡಳಿತ ಸರಿಯಲ್ಲ ಎನ್ನುವ ಸಂದೇಶ ನೀಡಬೇಕು. ಮುಂದೆ ನಾವು ರಾಜ್ಯಕ್ಕೆ ಅಭಿವೃದ್ದಿ ಸರ್ಕಾರ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಶಿರಾದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರ ನಾಮಪತ್ರ ಸಲ್ಲಿಕೆಯ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ ಸರ್ಕಾರದ ಆಡಳಿತ ಸರಿಯಿಲ್ಲ ಎನ್ನುವ ಸಂದೇಶವನ್ನು ಸಾರಬೇಕು. ಶಿರಾ ಜನರ ಉತ್ಸಾಹದ ಫಲಿತಾಂಶ ಏನಾಗುತ್ತದೆ ಎನ್ನುವುದನ್ನು ತಿಳಿಸುತ್ತದೆ ಎಂದಿದ್ದಾರೆ.
ಈ ಚುನಾವಣೆಯನ್ನು ನಾವ್ಯಾರು ಇಚ್ಛಿಸಿರಲಿಲ್ಲ. ಸತ್ಯನಾರಾಯಣ್ ಅವರ ಕೊನೆಯ ಚುನಾವಣೆ ಎಂದು ಅವರನ್ನು ಗೆಲ್ಲಿಸಿದ್ದಾರೆ. ನಮ್ಮ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರು ಬುದ್ದಿವಂತರು ಎಂದು ಹೇಳಿದ್ದಾರೆ.
ಈ ವೇಳೆ ಮಾತಾನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ನಿಷ್ಕ್ರಿಯ ಸರ್ಕಾರ ಆಡಳಿತದಲ್ಲಿದೆ. ಈ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯನ್ನು ಬಾರಿಸಬೇಕಿದೆ. ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದ ಸಂದರ್ಭ ಜಯಚಂದ್ರ ಅವರು ಅಭಿವೃದ್ದಿಯ ಕಾರ್ಯ ನಿರ್ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.
ಮತದಾರರು ಬುದ್ದಿವಂತರಾಗಿದ್ದು, ಜಯಚಂದ್ರ ಅವರಿಗೆ ಆಶೀರ್ವಾದ ನೀಡುತ್ತಾರೆ ಎನ್ನುವ ಭರವಸೆ ಇದೆ. ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಶಾಲಿಯಾಗಲಿದೆ. ನಾವು ಮುಂದೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ಹೇಳಿದ್ದಾರೆ.