ಹೈದರಾಬಾದ್, ಅ. 16 (DaijiworldNews/PY): ಹೈದರಾಬಾದ್ ಮತ್ತು ತೆಲಂಗಾಣದಲ್ಲಿ ಸತತ ಎರಡು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ಗುರುವಾರ ಕೊಂಚ ಕಡಿಮೆಯಾಗಿದೆ. ಮಳೆಯ ಅಬ್ಬರದಿಂದ ಸಾವನ್ನಪ್ಪಿರುವವರ ಸಂಖ್ಯೆ 50ಕ್ಕೆ ಏರಿದೆ. ಹೈದದಾಬಾದ್ನಲ್ಲಿಯೇ 11 ಮಂದಿ ಸಾವನ್ನಪ್ಪಿದ್ದಾರೆ.
ಬುಧವಾರದಂದ ಹೈದರಾಬಾದ್ ಹಾಗೂ ಇತರೆ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಗೆ ಜಲಾವೃತವಾಗಿದ್ದ ಪ್ರದೇಶಗಳಲ್ಲಿ ಗುರುವಾರ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಅಲ್ಲದೇ, ಭಾರೀ ಮಳೆಯ ಪರಿಣಾಮ ಜಲಾವೃತವಾಗಿರುವ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ಸುರಕ್ಷಿತವಾದ ಸ್ಥಳಗಳಿಗೆ ಸ್ಥಳಾಂತರ ಮಾಡುವ ಕಾರ್ಯಚರಣೆ ಕೂಡಾ ಕೈಗೊಳ್ಳಲಾಗಿದೆ.
ಮಳೆಯಿಂದ ಉಂಟಾದ ಪ್ರವಾಹದಿಂದ ಸುಮಾರು 5,000 ಕೋಟಿ ಹಾನಿಯಾಗಿದ್ದು, ಪರಿಹಾರ ಹಣವಾಗಿ ಕೇಂದ್ರ ಸರ್ಕಾರ ಕೂಡಲೇ 1,350 ಕೋಟಿ. ರೂ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಕೇಳಿದೆ.
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಮಳೆಯ ಕಾರಣ ಭೀಮಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಹಲವಾರು ಗ್ರಾಮಗಳು ಜಲಾವೃತವಾಗಿವೆ. ಅಲ್ಲದೇ, ಪಂಡರಾಪುರದಲ್ಲಿನ ಹಲವಾರು ದೇವಾಲಯಗಳು ಕೂಡಾ ಜಲಾವೃತಗೊಂಡಿವೆ.