ನವದೆಹಲಿ, ಅ. 16 (DaijiworldNews/PY): ಭಾರತವು ಇನ್ನು ಕೆಲವೇ ತಿಂಗಳುಗಳಲ್ಲಿ ಕೊರೊನಾ ಲಸಿಕೆ ಹೊಂದುವ ನಿರೀಕ್ಷೆಯಿದೆ. ಮುಂದಿನ ಆರು ತಿಂಗಳಲ್ಲಿ ಲಸಿಕೆಯನ್ನು ವಿತರಣೆ ಮಾಡುವ ಪ್ರಕ್ರಿಯೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಭಾರತೀಯ ರೆಡ್ಕ್ರಾಸ್ ಸೊಸೈಟಿ ಹಾಗೂ ಸೈಂಟ್ ಜಾನ್ಸ್ ಆಂಬ್ಯುಲೆನ್ಸ್ ವಾರ್ಷಿಕ ಸಭೆಯಲ್ಲಿ ಈ ವಿಚಾರವಾಗಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಭಾರತವೂ ಕೂಡಾ ಕೊರೊನಾ ಲಸಿಕೆಯ ಅಭಿವೃದ್ದಿಯಲ್ಲಿ ತೊಡಗಿಸಿಕೊಂಡಿದೆ. ಮುಂದಿನ ಆರು ತಿಂಗಳಲ್ಲಿ ನಾವು ಲಸಿಕೆಯನ್ನು ಭಾರತದ ಜನರಿಗೆ ತಲುಪಿಸುವ ಪ್ರತಿಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಿದ್ದೇವೆ ಎಂದಿದ್ದಾರೆ.
ಕೊರೊನಾ ವಿರುದ್ದ ಹೋರಾಡಲು ನಾವು ಆರು ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಅಲ್ಲದೇ, ನಿಯಮಿತವಾಗಿ ಕೈ ತೊಳೆದುಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ವಿಶೇಷವಾಗಿ ಸಾರ್ವಜನಿಕ ಸ್ಥಳಗಳಲ್ಲಿ ನಾವು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಿದ್ದಾರೆ.
ಈ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ನಾವು ಪಾಲಿಸಿದರೆ ಇತರರ ಜೀವವನ್ನು ಉಳಿಸಬಹುದಾಗಿದೆ. ಇದು ಸರ್ಕಾರದ ಉದ್ದೇಶವಾಗಿದೆ ಎಂದಿದ್ದಾರೆ.
ಈ ನಡುವೆ ಐಆರ್ಸಿಎಸ್ ರಕ್ತ ಕೇಂದ್ರಗಳ ಮುಖಾಂತರ ಅಗತ್ಯವಿರುವ ಜನರಿಗೆ ರಕ್ತದ ಕೊರತೆ ಉಂಟಾಗದಂತೆ ನೋಡಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಐಆರ್ಸಿಎಸ್ ದೇಶಾಂತ್ಯಂತ ರಕ್ತ ಸೇವಗಳ 24x7 ಕಾರ್ಯಚರಣೆಗಾಗಿ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.