ಬಾರಬಂಕಿ, ಅ. 16 (DaijiworldNews/PY): 18 ವರ್ಷದ ದಲಿತ ಯುವತಿಯ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಾರಬಂಕಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಕೃಷಿ ಭೂಮಿಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಕತ್ತು ಹಿಸುಕಿ ಹತ್ಯೆಗೈಯುವ ಮುನ್ನ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಎಸ್.ಗೌತಮ್ ತಿಳಿಸಿದ್ದಾರೆ.
ಸತ್ರಿಖ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರಕ್ಕೆ ಸಂಬಂಧಿಸಿದ ಆರೋಪಗಳನ್ನು ನೋಂದಾಯಿಸಿರುವ ಎಫ್ಐಆರ್ನಲ್ಲಿ ಸೇರಿಸಲಾಗುವುದು. ಕೆಲವು ಶಂಕಿತರನ್ನು ವಿಚಾರಣೆಗಾಗಿ ವಶಪಡಿಸಿಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮಗಳು ಹೊಲಕ್ಕೆ ಹೋದವಳು ವಾಪಾಸ್ಸಾಗಲಿಲ್ಲ ಎಂದು ಯುವತಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಯುವತಿಯ ಶವ ಪತ್ತೆಯಾಗಿದೆ.
ಗ್ರಾಮಕ್ಕೆ ಭೇಟಿ ನೀಡಿ ಎಫ್ಐಆರ್ ದಾಖಲಿಸುವ ಮುನ್ನ ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.