ನವದೆಹಲಿ, ಅ. 16 (DaijiworldNews/MB) : ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರಿಗೂ ಕೊರೊನಾ ಪಾಸಿಟಿವ್ ಆಗಿದೆ.
ಈ ಬಗ್ಗೆ ಸ್ವತಃ ಗುಲಾಮ್ ನಬಿ ಆಜಾದ್ ಅವರೇ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
''ಕೊರೊನಾ ಪರೀಕ್ಷೆಯಲ್ಲಿ ನನಗೆ ಕೊರೊನಾ ಪಾಸಿಟಿವ್ ಆಗಿದೆ. ನಾನು ಹೋಂ ಕ್ವಾರಂಟೈನ್ಗೆ ಒಳಗಾಗಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೊನಾ ಮಾರ್ಗಸೂಚಿಯನ್ನು ಅನುಸರಿಸಬೇಕು'' ಎಂದು ತಿಳಿಸಿದ್ದಾರೆ.