ನವದೆಹಲಿ, ಅ. 16 (DaijiworldNews/HR): ಕಳೆದ ಏಳೆಂಟು ತಿಂಗಳಲ್ಲಿ ಕೊರೊನಾ ರೋಗದ ನಡುವೆಯು ದೇಶದ ಬಡ ಜನರಿಗೆ ಉಚಿತವಾಗಿ ಪಡಿತರವನ್ನು ಪೂರೈಕೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಪ್ರಧಾನಿ, ಕೊರೊನಾ ಸಂಧರ್ಭದಲ್ಲಿ ಹಸಿವು ನೀಗಿಸಲು ದೇಶದಲ್ಲಿ 1.5 ಲಕ್ಷ ಕೋಟಿ ಮೊತ್ತದ ಆಹಾರ ಧಾನ್ಯಗಳನ್ನು ಬಡಜನರಿಗೆ ವಿತರಿಸಲಾಗಿದೆ. ಅಪೌಷ್ಟಿಕತೆಯನ್ನು ನಿಭಾಯಿಸುವ ನಿಟ್ಟಿನಲ್ಲಿ ಪ್ರೋಟೀನ್, ಕಬ್ಬಿಣ ಮತ್ತು ಸತುವುಗಳಂತಹ ಪೌಷ್ಟಿಕ ಪದಾರ್ಥ ಹೆಚ್ಚಾಗಿರುವ ಆಹಾರ ಬೆಳೆಗಳನ್ನು ದೇಶದಲ್ಲಿ ಪ್ರೋತ್ಸಾಹಿಸಲಾಗುತ್ತಿದೆ ಎಮ್ದರು.
ಇನ್ನು ಇಂದು ವಿಶ್ವ ಆಹಾರ ದಿನದ ಸಂದರ್ಭದಲ್ಲಿ ವಿಶ್ವದಾದ್ಯಂತ ಅಪೌಷ್ಟಿಕತೆಯನ್ನು ಹೋಗಲಾಡಿಸಲು ನಿರಂತರವಾಗಿ ಶ್ರಮಿಸುತ್ತಿರುವ ಎಲ್ಲರನ್ನು ಅಭಿನಂದಿಸುತ್ತೇನೆ ಎಂದರು.