ಬೆಂಗಳೂರು, ಅ. 16 (DaijiworldNews/MB) : ಪಿಯು ಉಪನ್ಯಾಸಕರಿಗೆ ಅಕ್ಟೋಬರ್ 21ರಿಂದ ನವೆಂಬರ್ 1ರವರೆಗೆ ದಸರಾ ರಜೆ ಘೋಷಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದಿನಾಂಕ.21.10.2020 ರಿಂದ 01.11.2020 ರವರೆಗೆ ಪದವಿಪೂರ್ವ ಶಿಕ್ಷಣ ಉಪನ್ಯಾಸಕರುಗಳಿಗೆ ದಸರಾ ರಜೆ ಘೋಷಿಸಲು ಇಲಾಖಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.