ನವದೆಹಲಿ, ಅ. 16 (DaijiworldNews/MB) : ವೈದ್ಯಕೀಯ ಪ್ರವೇಶಕ್ಕಾಗಿ ನಡೆಸಲಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್) ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು 99.99% ಅಂಕ ಗಳಿಸಿರುವ ಒಡಿಶಾದ ಶೋಯಬ್ ಅಫ್ತಾಬ್ ಅವರು ಈ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
7.7 ಲಕ್ಷ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆ ಹೊಂದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿದೆ. ತ್ರಿಪುರದ ಅತ್ಯಧಿಕ ಅಭ್ಯರ್ಥಿಗಳು ಪಾಸಾಗಿದ್ದಾರೆ. ತ್ರಿಪುರಾದ ನಂತರದ ಸ್ಥಾನದಲ್ಲಿ ಮಹಾರಾಷ್ಟ್ರದ ಅಭ್ಯರ್ಥಿಗಳು ಇದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹೇಳಿದೆ.
ಈ ವರ್ಷ 15.97 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು ಸೆಪ್ಟೆಂಬರ್ 13 ರಂದು ನಡೆದ ಪರೀಕ್ಷೆಗೆ ಶೇ. 85 - 90 ರಷ್ಟು ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು. ಆದರೆ ಬಳಿಕ ಕೊರೊನಾ ಕಾರಣದಿಂದಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಳಿಗೆ ಅಕ್ಟೋಬರ್ 14 ರಂದು ನಡೆದ ಎರಡನೇ ಹಂತದ ಪರೀಕ್ಷೆಯಲ್ಲಿ ಹಾಜರಾಗಲು ಅವಕಾಶ ನೀಡಲಾಗಿದೆ.