ಅನಂತ್ನಾಗ್, ಅ. 17 (DaijiworldNews/HR): ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆಗೈದ ಘಟನೆ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದಿದೆ.
ಉಗ್ರರು ಅನುಮಾನಾಸ್ಪದ ರೀತಿಯಲ್ಲಿ ಓಡಾಟಗಳು ಕಂಡುಬಂದಿದ್ದು ಈ ಹಿನ್ನಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಭದ್ರತಾಪಡೆಗಳು ಜಂಟಿ ಕಾರ್ಯಾಚರಣೆ ನಡೆದಿದೆ.
ಕಾರ್ಯಚರಣೆಯ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು,ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿ ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.
ಇನ್ನು ಹತ್ಯೆಯಾದ ಉಗ್ರನ ಬಳಿಯಿದ್ದ ಎಕೆ ರೈಫಲ್ ಹಾಗೂ ಸ್ಫೋಟಕ ವಸ್ತುಗಳನ್ನು ಭದ್ರತಾಪಡೆಗಳು ವಶಕ್ಕೆ ಪಡೆದುಕೊಂಡಿದೆ.