ಲಖನೌ,ಅ. 17 (DaijiworldNews/HR): ಬಿಜೆಪಿ ಮುಖಂಡ ಡಿಕೆ ಗುಪ್ತಾ ಅವರನ್ನು ಉತ್ತರಪ್ರದೇಶದ ಫಿರೋಜಾಬಾದ್ ನಲ್ಲಿ ಹತ್ಯೆ ಮಾಡಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಸಹೋದ್ಯೋಗಿಗಳಾದ ವಿರೇಶ್ ಟೋಮರ್, ನರೇಂದ್ರ ಟೋಮರ್ ಮತ್ತು ದೇವೇಂದ್ರ ಟೋಮರ್ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ ರಾತ್ರಿ ಡಿಕೆ. ಗುಪ್ತಾ ಅವರ ಮೇಲೆ ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಇದ್ದಕ್ಕಿದ್ದಂತೆ ಗುಂಡಿನ ದಾಳಿ ನಡೆಸಿ, ಬಳಿಕ ಸ್ಥಳದಿಂದ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಗುಪ್ತಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇನ್ನು ಹತ್ಯೆಗೀಡಾದ ಗುಪ್ತಾ ಅವರು ಫಿರೋಜಾಬಾದ್ ಮಂಡಲನ ಬಿಜೆಪಿ ಉಪಾಧ್ಯಕ್ಷರಾಗಿದ್ದರು ಎಂದು ತಿಳಿದು ಬಂದಿದೆ.