ಬೆಂಗಳೂರು, ಅ. 17 (DaijiworldNews/MB) : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಕರಾಗುವಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿ, ಪ್ರಮುಖ ಆರೋಪಿ ಆದಿತ್ಯ ಆಳ್ವನ ಸಹೋದರಿ ಪ್ರಿಯಾಂಕಾ ಆಳ್ವರಿಗೆ ಶನಿವಾರ ಮತ್ತೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ.
ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಆಳ್ವ ಅವರು ತಮ್ಮ ಸಹೋದರ ಆದಿತ್ಯ ಆಳ್ವನಿಗೆ ಆಶ್ರಯ ನೀಡಿದ ಆರೋಪದಲ್ಲಿ ಗುರುವಾರ ಸಿಸಿಬಿ ಪೊಲೀಸರು ಮುಂಬೈನ ಜುಹು ಪ್ರದೇಶದಲ್ಲಿರುವ ಒಬೆರಾಯ್ ದಂಪತಿಯ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪ್ರಿಯಾಂಕಾ ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಹೇಳಲಾಗಿದ್ದು ಈ ಹಿನ್ನೆಲೆ ಸಿಸಿಬಿ ಅಧಿಕಾರಿಗಳು ವಾಟ್ಸ್ಆಪ್ ಮೂಲಕ ನೋಟಿಸ್ ನೀಡಿದ್ದರು.
ಆದರೆ ಪ್ರಿಯಾಂಕಾ ಶುಕ್ರವಾರ ವಿಚಾರಣೆಗೆ ಹಾಜರಾಗಿಲ್ಲ. ಈ ಕಾರಣದಿಂದಾಗಿ ಮತ್ತೆ ಪ್ರಿಯಾಂಕಾ ಆಳ್ವಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.