ಪಾಟ್ನಾ, ಅ. 17 (DaijiworldNews/HR): ರಾಜಕೀಯ ಸೇವೆಯಿಂದ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರು ತುಂಬಾ ಆಯಾಸಗೊಂಡಿದ್ದಾರೆ. ಹಾಗಾಗಿ ಇನ್ಮುಂದೆ ಬಿಹಾರ ರಾಜ್ಯದಲ್ಲಿ ಆಡಳಿತ ನಡೆಸಲು ಅವರಿಗೆ ಕಷ್ಟವಾಗುತ್ತದೆ ಎಂದು ರಾಷ್ಟ್ರೀಯ ಜನತಾ ದಳದ ಮುಖಂಡ ತೇಜಸ್ವಿ ಯಾದವ್ ವ್ಯಂಗ್ಯ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ತೇಜಸ್ವಿ, ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಅಭಿವೃದ್ಧಿ ಬಗ್ಗೆ, ನಿರುದ್ಯೋಗ, ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ, ಬಡತನದ ಬಗ್ಗೆ ಮಾತನಾಡುವುದು ಬೇಕಾಗಿಲ್ಲ. ಅವರು ರಾಜಕೀಯ ಸೇವೆಯಿಂದ ತುಂಬಾ ಬಳಲಿದ್ದಾರೆ ಎಂದರು.
ಇನ್ನು ಬಿಹಾರದಲ್ಲಿ ಕೈಗಾರಿಕೆಗಳಿಗೆ ಉತ್ತೇಜನ ನೀಡದೆ ಇದ್ದರೆ, ಯಾವುದೇ ಉದ್ಯೋಗ ಸೃಷ್ಟಿಯಾಗುವುದಿಲ್ಲ. ಕೆಲವು ದಿನಗಳ ಹಿಂದಷ್ಟೇ ರಾಜ್ಯದ ಆರ್ಥಿಕತೆ ಬಗ್ಗೆ ನಿತೀಶ್ ಕುಮಾರ್ ಅವರು ನೀಡಿರುವ ಹೇಳಿಗೆ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಈ ಪ್ರತಿಕ್ರಿಯೆ ನೀಡಿದ್ದಾರೆ.
ರಾಗೋಪುರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತೇಜಸ್ವಿ ಯಾದವ್ ನಾಮಪತ್ರ ಸಲ್ಲಿಸಿದ್ದು, ತನ್ನ ವಿರುದ್ಧದ ಆರ್ಥಿಕ ಸಂಪತ್ತಿನ ಕುರಿತ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.