ಪಾಟ್ನಾ,ಅ. 17 (DaijiworldNews/HR): ಆರ್ಜೆಡಿ ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ, ಎನ್ಡಿಎ ಸರಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯಿದೆಗಳನ್ನು ರದ್ದುಗೊಳಿಸಲಾಗುವುದು ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
ಈ ಪ್ರಣಾಳಿಕೆಯನ್ನು ಆರ್ಜೆಡಿ ನಾಯಕ ತೇಜಸ್ವಿ ಯಾದವ್, ಕಾಂಗ್ರೆಸ್ನ ರಣದೀಪ್ ಸುರ್ಜೇವಾಲ ಮತ್ತು ಶಕ್ತಿಸಿನ್ಹ ಗೋಹಿಲ್ ಬಿಡುಗಡೆ ಮಾಡಿದ್ದಾರೆ.
ಬಳಿಕ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ತೇಜಸ್ವಿ ಯಾದವ್ ನೇತೃತ್ವದಲ್ಲಿ ನಾವು ಸರಕಾರ ರಚಿಸಿದರೆ, ಮೊದಲು ಈ ಮೂರು ಕೃಷಿ ಕಾಯಿದೆಗಳನ್ನು ರದ್ದುಗೊಳಿಸುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಈ ಮೂರು ಕೃಷಿ ಮಸೂದೆಗಳಿಗೆ ಸಂಸತ್ ಅನುಮೋದನೆ ನೀಡಿದ್ದು, ಇದಕ್ಕೆ ರಾಷ್ಟ್ರಪತಿಗಳು ಸಹಿಯನ್ನೂ ಹಾಕುವುದರೊಂದಿಗೆ ಇದು ಕಾಯಿದೆಯಾಗಿ ಜಾರಿಗೂ ಬಂದಿದ್ದು, ಇದಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಗಳನ್ನ ನಡೆಸಿದ್ದರು.