ಮೈಸೂರು,ಅ.18 (DaijiworldNews/HR): ಕಳೆದ ಎರಡು ತಿಂಗಳಿನಿಂದ ಕರ್ನಾಟಕದಲ್ಲಿ ಪ್ರವಾಹದಿಂದ ಒಟ್ಟು 9,952 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ.
ಈ ಕುರಿತು ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಭಾರೀಯ ಪ್ರವಾಹದಿಂದಾಗಿ 10.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಪಾರ ಬೆಳೆಗಳಿಗೆ ಹಾನಿಯುಂಟಾಗಿದ್ದು, ರೂ.9,952 ಕೋಟಿ ನಷ್ಟ ಎದುರಾಗಿದೆ ಎಂದರು.
ಇನ್ನು ಕರ್ನಾಟಕದಲ್ಲಿ ಅತಿವೃಷ್ಟಿಯಿಂದಾಗಿ ಮೂಲಸೌಲಭ್ಯಕ್ಕೆ ಕೂಡ ಹಾನಿಯಾಗಿದ್ದು, ಸುಮಾರು ರೂ.4,851 ಕೋಟಿ ಮೂಲಸೌಲಭ್ಯ ನಷ್ಟವಾಗಿದೆ. ರಾಜ್ಯದ 51,810 ರೈತರಿಗೆ ಬೆಳೆ ಪರಿಹಾರವಾಗಿ ಒಟ್ಟು ರೂ.36.57 ಕೋಟಿಯನ್ನು ಅವರ ಖಾತೆಗೆ ಜಮೆ ಮಾಡಲಾಗಿದೆ ಎಂದು ಹೇಳಿದ್ದಾರೆ.