ನವದೆಹಲಿ, ಅ.18 (DaijiworldNews/HR): ಬಿಹಾರ ವಿಧಾನಸಭೆ ಚುನಾವಣೆ ಬಳಿಕ ಬಿಹಾರದಲ್ಲಿ ಮತ್ತೊಮ್ಮೆ ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸಾಂಧರ್ಭಿಕ ಚಿತ್ರ
ಈ ಕುರಿತು ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿದ ಅಮಿತ್ ಶಾ, ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ ಸಿಗಲಿದ್ದು, ನೀತಿಶ್ ಅವರೇ ಮುಂದಿನ ಬಿಹಾರದ ಮುಖ್ಯಮಂತ್ರಿಯಾಗಲಿದ್ದಾರೆ. ಬಿಹಾರದ ಜನತೆಗೆ ಡಬಲ್ ಎಂಜಿನ್ ನ ಸರ್ಕಾರ ಆಡಳಿತಕ್ಕೆ ಸಿಗಲಿದೆ. ಒಂದು ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಮತ್ತು ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಂದು ಹೇಳಿದ್ದಾರೆ.
ಇನ್ನು ನಮ್ಮ ಪಕ್ಷಕ್ಕೆ ಸೀಟುಗಳನ್ನು ನೀಡುವುದಾಗಿ ಹೇಳಲಾಗಿತ್ತು ಆದರೆ ಲೋಕ ಜನಶಕ್ತಿ ಪಕ್ಷ ಮೈತ್ರಿ ಕಡಿದುಕೊಂಡು ಹೋಗಿದೆ, ಇದು ಅವರ ತೀರ್ಮಾನ, ನಮ್ಮದಲ್ಲ ಎಂದರು.