ಬೆಂಗಳೂರು, ಅ. 18 (DaijiworldNews/PY): ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಕ್ಟೋಬರ್ 21ರಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಭಾರಿ ಮಳೆಯಿಂದಾಗಿ ಹಾನಿಗೊಳಗಾಗಿರುವ ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಿಎಂ ಬಿಎಸ್ವೈ ಅವರು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಹಾಮಳೆಯ ಪರಿಣಾಮ ಅತಿವೃಷ್ಟಿ ಹಾಗೂ ಪ್ರವಾಹ ಉಂಟಾಗಿದ್ದು, ಇದರಿಂದಾಗಿ ಬೆಳೆ ಹಾನಿ ಸೇರಿದಂತೆ ಮನೆ ಹಾನಿ, ಜೀವ ಹಾನಿಯಾಗಿದೆ.