ಚಂಡಿಗಢ,ಅ.18 (DaijiworldNews/HR): ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ಪಂಜಾಬ್ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಲ್ವಿಂದರ್ ಸಿಂಗ್ ಕಾಂಗ್ ತನ್ನ ಪಕ್ಷದ ಪ್ರಾಥಮಿಕ ಸದಸ್ವತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮ ಪಕ್ಷದಲ್ಲಿ ಯಾರೂ ಕೂಡ ಕೃಷಿ ಕಾನೂನುಗಳ ಬಗ್ಗೆ ಮಾತನಾಡಲು ಸಿದ್ಧರಿಲ್ಲ ಜೊತೆಗೆ ಹಿರಿಯ ನಾಯಕತ್ವವು ಪಂಜಾಬ್ ಪರ ಮನೋಭಾವವನ್ನು ಹೊಂದಿಲ್ಲ ಎಂದು ಆರೋಪಿಸಿದ್ದಾರೆ.
ಕೃಷಿ ಕಾಯ್ದೆಯ ಕುರಿತು ನಾನು ಮಾತನಾಡಿದಾಗ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ನನ್ನನ್ನು ಪಾಕಿಸ್ತಾನಿ ಎಂದು ಕರೆದರು. ಅವರ ಭಾಷೆಯ ವಿರುದ್ಧ ನಾನು ಪ್ರತಿಭಟಿಸಿದಾಗ ಅವರು ಕ್ಷಮೆಯಾಚಿಸಬೇಕಾಯಿತು. ರೈತರ ಪರವಾಗಿ ಮಾತನಾಡುವವರ ಬಗ್ಗೆ ಬಿಜೆಪಿ ನಾಯಕತ್ವವು ಈ ರೀತಿಯ ಮನೋಭಾವವನ್ನು ಹೊಂದಿದೆ ಎಂದರು.
ಇನ್ನು ಮಲ್ವಿಂದರ್ ಸಿಂಗ್ ಪಂಜಾಬ್ ವಿವಿ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷರಾಗಿದ್ದು, ಬಳಿಕ ಸಾಮಾನ್ಯ ಕಾರ್ಯಕರ್ತನಾಗಿ ಬಿಜೆಪಿ ಸೇರಿದ್ದರು. ಕೆಲವೇ ವರ್ಷಗಳಲ್ಲಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾದರು.