ಮೈಸೂರು, ಅ. 19 (DaijiworldNews/PY): ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್.ಎ.ರಾಮದಾಸ್ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಮದಾಸ್ ಅವರಿಗೆ ಇಂದು ಮುಂಜಾನೆ 5 ಗಂಟೆಯ ಸುಮಾರಿಗೆ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ, ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ. ಸದ್ಯ ರಾಮದಾಸ್ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಕೆಲವು ದಿನಗಳಿಂದ ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಇದೀಗ ದಿಢೀರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.