ಶ್ರೀನಗರ, ಅ. 19 (DaijiworldNews/PY): ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಗೆ ಸಿಆರ್ಪಿಎಫ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಪುಲ್ವಾಮಾದ ಗಂಗೂನಲ್ಲಿ ಪೊಲೀಸರು ಹಾಗೂ ಸಿಆರ್ಪಿಎಫ್ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಉಗ್ರರು ನಡೆಸಿದ ದಾಳಿಯ ಪರಿಣಾಮ ಸಿಆರ್ಪಿಎಫ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.