ಅಮರಾವತಿ, ಅ. 20 (DaijiworldNews/PY): ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ಅವರು ತೆಲಂಗಾಣ ಸರ್ಕಾರದ ಮನವಿಗೆ ಸ್ಪಂದಿಸಿದ್ದು, ಹೈದಾರಾಬಾದ್ನಲ್ಲಿ ಉಂಟಾದ ಪ್ರವಾಹದ ರಕ್ಷಣಾ ಕಾರ್ಯಾಚರಣೆಗೆ ಸ್ಪೀಡ್ ಬೋಟ್ಗಳನ್ನು ಕಳುಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹೈದರಾಬಾದ್ ಸೇರಿದಂತೆ ಬಹುತೇಕ ಪ್ರದೇಶಗಳು ಮುಳುಗಡೆಯಾಗಿವೆ. ಈ ಹಿನ್ನೆಲೆ ಸುಮಾರು 37,000ಕ್ಕಿಂತ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಭಾರೀ ಮಳೆಯ ಪರಿಣಾಮ 33 ಮಂದಿ ಮೃತಪಟ್ಟಿದ್ದಾರೆ ಎಂದು ನಗರಾಭಿವೃದ್ದಿ ಮತ್ತು ಪುರಸಭೆ ಆಡಳಿತ ಸಚಿವ ಕೆ.ಟಿ. ರಾಮರಾವ್ ಅವರು ಮಾಹಿತಿ ನೀಡಿದ್ದಾರೆ.
ಈ ನಡುವೆ ಅ.22ರವರೆಗೆ ತೆಲಂಗಾಣದಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.