ಶ್ರೀನಗರ, ಅ. 20 (DaijiworldNews/PY): ಜಮ್ಮು-ಕಾಶ್ಮೀರದ ಶೋಪಿಯಾನ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಎನ್ಕೌಂಟರ್ನ ಸಂದರ್ಭ ಓರ್ವ ಉಗ್ರ ಗಾಯಗೊಂಡಿದ್ದು, ಉಗ್ರನನ್ನು ಅನಂತ್ನಾಗ್ ಜಿಲ್ಲೆಯಲ್ಲಿ ಸೆರೆ ಹಿಡಿಯಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಅನಂತ್ನಾಗ್ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ಹೋಗುತ್ತಿದ್ದ ಸಂದರ್ಭ ಉಗ್ರರು ಗುಂಡಿನ ದಾಳಿ ಮಾಡಿದ್ದರು. ದಾಳಿಯ ಪರಿಣಾಮ ಗಾಯಗೊಂಡಿದ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಶ್ರಫ್ ಭಟ್ ಅವರನ್ನು ಬಿಜ್ ಬೆಹ್ರಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿದ್ದಾರೆ.
ಪೊಲೀಸ್ ಅಧಿಕಾರಯ ಮೇಲೆ ದಾಳಿ ನಡೆಸಿ ಹತ್ಯೆಗೈದ ಒಂದೇ ಗಂಟೆಯಲ್ಲಿ ಓರ್ವ ಉಗ್ರನನ್ನು ಭದ್ರತಾಪಡೆಗಳು ಹತ್ಯೆಗೈದಿದ್ದು, ಓರ್ವನನ್ನು ಹೆಡೆಮುರಿಕಟ್ಟಿದ್ದಾರೆ.
ಭದ್ರತಾ ಪಡೆಗಳು ಘಟನಾ ಸ್ಥಳವನ್ನು ಸುತ್ತುವರೆದಿವೆ. ಅಲ್ಲದೇ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.