ಭೋಪಾಲ್ , ಅ. 20 (DaijiworldNews/HR): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಇಮರ್ತಿ ದೇವಿ ಬಗ್ಗೆ ಅಗೌರವ ಹೇಳಿಕೆಗಳನ್ನು ನೀಡಿಲ್ಲ, ಬಿಜೆಪಿ ಜನರನ್ನು ತಪ್ಪು ದಾರಿಗೆಳೆಯುತ್ತಿದೆ ಎಂದು ಆರೋಪಿಸಿ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.
ಕಮಲ್ ನಾಥ್ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ನಾನು ಸಚಿವೆ ವಿರುದ್ಧ ಯಾವುದೇ ಅಗೌರವ ಹೇಳಿಕೆ ನೀಡಿಲ್ಲ, ನಾನು ಹೇಳಿರುವ ಶಬ್ದದಲ್ಲಿ ಸಾಕಷ್ಟು ಅರ್ಥವಿದೆ. ಆ ಶಬ್ದವನ್ನು ದುರುದ್ದೇಶಪೂರ್ವಕವಾಗಿ ತಪ್ಪಾಗಿ ವ್ಯಾಖ್ಯಾನಿಸಿ ಬಿಜೆಪಿ ಪಕ್ಷದವರು ನನ್ನ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮಧ್ಯ ಪ್ರದೇಶ ಮಹಿಳೆಯರ ವಿರುದ್ಧದ ಅಪರಾಧದಲ್ಲಿ ಉನ್ನತ ಸ್ಥಾನಕ್ಕೆ ಹೋಗಿದೆ, ಆದರೆ ಶಿವರಾಜ್ ಸಿಂಗ್ ಚೌಹಾಣ್ ಅವರು ಯಾವುದೇ ರೀತಿಯ ಕಠಿಣ ಕ್ರಮ ಕೈಗೊಂಡಿಲ್ಲ. ತಮ್ಮ 16 ವರ್ಷಗಳ ಆಡಳಿತದಲ್ಲಿ ರಾಜ್ಯ ಹೆಣ್ಣುಮಕ್ಕಳ ವಿರುದ್ಧ ಅಪರಾಧ, ಅತ್ಯಾಚಾರ ಕೇಸುಗಳಲ್ಲಿ ಹೆಚ್ಚಾಗುತ್ತಿದೆ. ಆದರೆ ಇಷ್ಟು ದಿನ ನೀವು ಮಾತ್ರ ಮೌನವಾಗಿದ್ದೀರಿ, ಹೆಣ್ಣು ಮಕ್ಕಳ ಬಗ್ಗೆ ಅಷ್ಟೊಂದು ಗೌರವ, ಕಾಳಜಿಯಿದ್ದಿದ್ದರೆ ಏಕೆ ನೀವು ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.