ನವದೆಹಲಿ, ಅ. 20 (DaijiworldNews/PY): ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿರುವ ಲಕ್ಷಣ ಕಾಣುತ್ತಿದ್ದು, ಸತತ ಏಳು ತಿಂಗಳ ಬಳಿಕ ಕೊರೊನಾ ಸೋಂಕಿನ ಪ್ರಭಾವ ಇಳಿಯುವ ಲಕ್ಷಣ ಕಾಣುತ್ತಿದೆ.
ದೇಶದ ಐದು ಅಗ್ರ ರಾಜ್ಯಗಳಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಪ್ರಮಾಣ ಇಳಿಕೆಯಾಗುತ್ತಿದೆ. ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಕೇರಳ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಕೊರೊನಾ ಸಂಕ್ರಿಯ ಪ್ರಕರಣಗಳು ಇಳಿಕೆಯಾಗುತ್ತಿವೆ. ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು ಇಳಿಕೆಯಾಗುವ ಲಕ್ಷಣ ಕಾಣಿಸುತ್ತಿದ್ದು, ಕಳೆದ ಮೂರು ದಿನಗಳಿಂದ 8 ಲಕ್ಷಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳನ್ನು ತೋರಿಸುತ್ತಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.