ಪಟ್ನಾ, ಅ. 20 (DaijiworldNews/HR): ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಬಹುಮತ ದೊರೆಯದಿದ್ದಲ್ಲಿ ಎಲ್ಜೆಪಿ ಬೆಂಬಲ ಕೋರಲು ಹಿಂಜರಿಯುವುದಿಲ್ಲ ಎಂಬುದಾಗಿ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ, ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.
ಆರ್ಜೆಡಿ ಪಕ್ಷವು ಬಿಹಾರ ವಿಧಾನಸಭೆ ಚುನಾವಣೆಗೆ 144 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಎನ್ಡಿಎಯಿಂದ ಹೊರಗುಳಿದಿರುವ ಎಲ್ಜೆಪಿ 143 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಜೆಡಿಯು ಅಭ್ಯರ್ಥಿಗಳ ವಿರುದ್ಧವೇ ಇವರು ಸ್ಪರ್ಧಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಎಲ್ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಮತ್ತು ತೇಜಸ್ವಿ ಯಾದವ್ ಇಬ್ಬರೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ರಾಜಕೀಯ ವಿರೋಧಿಗಳಾಗಿದ್ದು, ನಿತೀಶ್ ನನ್ನು ಮತ್ತೆ ಮುಖ್ಯಮಂತ್ರಿಯಾಗಲು ಬಿಡುವುದಿಲ್ಲ ಎಂದು ಹೇಳುತ್ತಿದ್ದಾರೆ.