ಶಿವಮೊಗ್ಗ, ಅ. 20 (DaijiworldNews/MB) : ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಕಲ್ಪಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸಿಕೊಡುವುದು ಸರ್ಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲರಿಗೂ ನಿವೇಶನ ಒದಗಿಸುವುದು ಸರ್ಕಾರದ ಆಧ್ಯತೆ. ಎಲ್ಲರ ಮನೆ ಮನೆಗೆ ಹಕ್ಕುಪತ್ರ ತಲುಪಿಸಲಾಗುತ್ತದೆ ಎಂದು ಹೇಳಿದರು.
ಈ ವಿಚಾರವಾಗಿ ಮಧ್ಯವರ್ತಿಗಳಿಗೆ ಯಾರು ಹಣ ನೀಡಬಾರದು ಎಂದು ಹೇಳಿದ ಅವರು, ಯಾರಾದರೂ ಹಣ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಎಂದು ತಿಳಿಸಿದ್ದಾರೆ.