ವಯನಾಡ್, ಅ. 20 (DaijiworldNews/HR): ಕೊರೊನಾ ಸೋಂಕು ತಡೆಗಟ್ಟುವ ಕುರಿತು ವಯನಾಡ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಾಹುಲ್ ಗಾಂಧಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾಗಿಯಾಗಿದ್ದಾರೆ ಕೊರೊನಾ ಪರಾಮರ್ಶೆ ಸಭೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನನ್ನ ಕ್ಷೇತ್ರದಲ್ಲಿ ಕೊರೊನಾ ನಿರ್ವಹಣೆಯನ್ನು ಪರಿಶೀಲಿಸಲಾಗಿದೆ. ಆದರೆ ಕೊರೊನಾ ವೇಗವಾಗಿ ಹರಡುತ್ತಿರುವಾಗ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೆಚ್ಚಿನ ಗಮನ ಹರಿಸುತ್ತಿಲ್ಲ. ಆದರೆ ನಾವೆಲ್ಲರೂ ಕೊರೊನಾವನ್ನು ಸೋಲಿಸುವತ್ತ ಗಮನ ಹರಿಸಬೇಕು ಎಂದಿದ್ದಾರೆ.
ಕೇರಳಕ್ಕೆ ಸೋಮವಾರ ಬಂದಿರುವ ರಾಹುಲ್ ಬುಧವಾರದ ವರೆಗೆ ತಾವು ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರದಲ್ಲಿ ಇರಲಿದ್ದು, ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಾಮರ್ಶೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇನ್ನು ರಾಜಕೀಯ ಕಾರಣಕ್ಕಾಗಿ ತಮ್ಮನ್ನು ಸಭೆಗೆ ಹಾಜರಾಗದಂತೆ ಸೂಚಿಸಲಾಗಿದೆ ಎಂಬುದಾಗಿ ವಯನಾಡ್ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆರೋಪಿಸಿದ್ದಾರೆ.
ಜಿಲ್ಲಾಧಿಕಾರಿ, ಸಂಸದರು ಹಾಗೂ ಹಿರಿಯ ಅಧಿಕಾರಿಗಳ ಜತೆಗಿನ ಸಭೆಯಲ್ಲಿ ಭಾಗವಹಿಸುವಂತೆ ನನ್ನನ್ನು ಆಹ್ವಾನಿಸಲಾಗಿತ್ತು. ಆದರೆ ಸಭೆಗೆ ಹಾಜರಾಗುವ ಅಗತ್ಯವಿಲ್ಲ ಎಂಬ ಸಂದೇಶ ಬಂದಿದೆ ಎಂದು ಹೇಳಿದ್ದಾರೆ.