ಲಕ್ನೋ, ಅ. 21 (DaijiworldNews/MB) : ಉತ್ತರಪ್ರದೇಶದಲ್ಲಿ ಅಪರಾಧಗಳು ಹೆಚ್ಚುತ್ತಿರುವ ಮಧ್ಯೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸರ್ಕಾರವು ಅಪರಾಧ ಕೃತ್ಯಗಳನ್ನು ಹಾಗೂ ಅಪರಾಧಿಗಳ ಬಗ್ಗೆ ಸಹಿಷ್ಣುತೆಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.
ಲಕ್ನೋದಲ್ಲಿ ನಡೆದ ಪೊಲೀಸ್ ಸ್ಮರಣಾರ್ಥ ದಿನದ ಮೆರವಣಿಗೆಯಲ್ಲಿ ಮಾತನಾಡಿದ ಅವರು, "ನಮ್ಮ ಸರ್ಕಾರವು ಅಪರಾಧ ಮತ್ತು ಅಪರಾಧಿಗಳ ಬಗ್ಗೆ ಶೂನ್ಯ ಸಹಿಷ್ಣುತೆಯ ನೀತಿಯನ್ನು ಹೊಂದಿದೆ. ಇದರ ಪರಿಣಾಮವಾಗಿ, ಮಾರ್ಚ್ 20, 2017 ರಿಂದ 2020 ರ ಅಕ್ಟೋಬರ್ 5 ರವರೆಗೆ ಎನ್ಕೌಂಟರ್ಗಳಲ್ಲಿ ಒಟ್ಟು 125 ಅಪರಾಧಿಗಳು ಸಾವನ್ನಪ್ಪಿದ್ದಾರೆ. 2,607 ಮಂದಿ ಅಪರಾಧಿಗಳು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ, ಯುಪಿ ಮುಖ್ಯಮಂತ್ರಿ 2019-2020ರ ಅವಧಿಯಲ್ಲಿ ಕರ್ತವ್ಯದ ಸಾಲಿನಲ್ಲಿ ಹುತಾತ್ಮರಾದ ಒಂಬತ್ತು ಪೊಲೀಸ್ ಸಿಬ್ಬಂದಿಗೆ ಗೌರವ ಸಲ್ಲಿಸಿದರು.
1959 ರಲ್ಲಿ ಈ ದಿನದಂದು ಚೀನಾದ ಸೈನ್ಯದೊಂದಿಗೆ ಹೋರಾಡುವಾಗ ಲಡಾಖ್ನ ಹಾಟ್ ಸ್ಪ್ರಿಂಗ್ಸ್ನಲ್ಲಿ ಜೀವ ಬಲಿದಾನ ಮಾಡಿದ ಸಿಆರ್ಪಿಎಫ್ ಸಿಬ್ಬಂದಿಯ ನೆನಪಿಗಾಗಿ ಪ್ರತಿ ವರ್ಷ ಅಕ್ಟೋಬರ್ 21 ರಂದು ಪೊಲೀಸ್ ಸ್ಮರಣಾರ್ಥ ದಿನವನ್ನು ಆಚರಿಸಲಾಗುತ್ತದೆ.