ಶ್ರೀನಗರ,ಅ. 21 (DaijiworldNews/HR): ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ನಲ್ಲಿ(ಜೆಕೆಸಿಎ) ನಡೆದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿದ್ದು, ಇಂದು ಜಾರಿ ನಿರ್ದೇಶನಾಲಯ(ಇಡಿ) ಯ ಎದುರು ಹಾಜರಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫಾರೂಕ್ ಅಬ್ದುಲ್ಲಾ ಈ ವಾರದಲ್ಲಿ ಎರಡನೇ ಬಾರಿ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.
ಫಾರೂಕ್ ಅಬ್ದುಲ್ಲಾ ಅವರನ್ನು ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರು ತಾಸು ಪ್ರಶ್ನಿಸಿದ್ದು, ಈ ಘಟನೆ ಬಗ್ಗೆ ನಾನು ಚಿಂತಿಸುತ್ತಿಲ್ಲ. ತನಿಖೆಗೆ ಸಹಕರಿಸುವುದಾಗಿ ಸೋಮವಾರ ಇಡಿ ಎದುರು ಹಾಜರಾದ ನಂತರ ಫಾರೂಕ್ ಅಬ್ದುಲ್ಲಾ ಹೇಳಿದ್ದರು.
ಇನ್ನು ಫಾರೂಕ್ ಅವರ ಹೇಳಿಕೆಯನ್ನು ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ ದಾಖಲಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.