ಕಲಬುರಗಿ, ಅ. 21 (DaijiworldNews/MB) : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರು ಬುಧವಾರ ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಂಡರು.
ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜು ಬೊಮ್ಮಾಯಿ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಲಬುರಗಿಯಲ್ಲಿ ಸಮೀಕ್ಷೆ ನಡೆಸಿದ ಬಳಿಕ ಅಲ್ಲಿನ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಮಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.