ನವದೆಹಲಿ, ಅ. 21 (DaijiworldNews/HR): ಜಮ್ಮು, ಕಾಶ್ಮೀರ ಪಂಚಾಯತಿ ರಾಜ್ ಕಾಯ್ದೆ 1989 ಅನ್ನು ಜಾರಿಗೊಳಿಸಲು ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿರುವುದಾಗಿ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾಯ್ದೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತದ ತಳಮಟ್ಟದ ಪ್ರಜಾಪ್ರಭುತ್ವವನ್ನು ಸ್ಥಾಪಿಸಲು ಸಹಾಯ ಮಾಡುತ್ತದೆ. 370 ವಿಧಿ ರದ್ದುಗೊಳಿಸುವ ಮುನ್ನ ಕಣಿವೆ ರಾಜ್ಯದಲ್ಲಿ ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಇರಲಿಲ್ಲ. ಈಗ ಅಲ್ಲಿ ಪಂಚಾಯತ್ ರಾಜ್ ಕಾಯ್ದೆ ಜಾರಿಗೆ ಬರಲಿದೆ ಎಂದು ಜಾವಡೇಕರ್ ತಿಳಿಸಿದ್ದಾರೆ.
ಇನ್ನು ಜಮ್ಮು, ಕಾಶ್ಮೀರದಲ್ಲಿ ಮೋದಿ ಮತ್ತು ಸಂಸತ್ತಿನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಭರವಸೆಯಂತೆ ಈಗ ಪಂಚಾಯತ್ ರಾಜ್ ಕಾಯ್ದೆ ಜಾರಿಗೆ ಬರುತ್ತಿದೆ ಎಂದು ಅವರು ಹೇಳಿದರು.