ಭೋಪಾಲ್,ಅ.22 (DaijiworldNews/HR): ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಬಿಜೆಪಿ ಸಚಿವೆ ಇಮಾರ್ತಿ ದೇವಿ ಅವರನ್ನು 'ಐಟಂ' ಎಂದು ಕರೆದಿದ್ದು, ಇದೀಗ ಕಮಲ್ ನಾಥ್ ಗೆ ಚುನಾವಣಾ ಆಯೋಗ ನೋಟಿಸ್ ನೀಡಿದ್ದು, ಉಪಚುನಾವಣೆ ನಡೆಯುವ ಸಮಯದಲ್ಲಿ ರಾಜ್ಯದಲ್ಲಿ ಜಾರಿಯಲ್ಲಿರುವ ಮಾದರಿ ಸಂಹಿತೆಯನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಹೇಳಿದೆ.
ಕಮಲ್ ನಾಥ್ ಅವರು ನೊಟೀಸ್ ಸ್ವೀಕರಿಸಿದ 48 ಗಂಟೆಗಳ ಒಳಗೆ ಹೇಳಿಕೆಯನ್ನು ನೀಡಿರುವ ನಿಲುವನ್ನು ವಿವರಿಸಲು ಆಯೋಗವು ನಿಮಗೆ ಅವಕಾಶವನ್ನು ನೀಡುತ್ತದೆ, ಒಂದು ವೇಳೆ ಅದು ವಿಫಲವಾದರೆ ಭಾರತದ ಚುನಾವಣಾ ಆಯೋಗವು ಯಾವುದೇ ಸೂಚನೆ ನೀಡದೆಯೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದಾಗಿ ನೊಟೀಸ್ನಲ್ಲಿ ತಿಳಿಸಲಾಗಿದೆ.
ಇನ್ನು ಕಮಲನಾಥ್ ಅವರು ದಬ್ರಾ ಟೌನ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರದಲ್ಲಿದ್ದಾಗ ಅಭ್ಯರ್ಥಿ ಅತ್ಯಂತ ಸರಳ ವ್ಯಕ್ತಿ. ಅವರಂತೆ ಬಿಜೆಪಿ ಅಭ್ಯರ್ಥಿ (ಇಮಾರ್ತಿ ದೇವಿ) ಐಟಂ' ಅಲ್ಲ ಎಂದು ಗೇಲಿ ಮಾಡಿದ್ದರು.
ಈ ಹೇಳಿಕೆಯನ್ನು ಖಂಡಿಸಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಕೈಗೊಂಡಿದ್ದು, ರಾಷ್ಟ್ರೀಯ ಮಹಿಳಾ ಆಯೋಗವು ಈ ಹೇಳಿಕೆಗೆ ಕಾಂಗ್ರೆಸ್ ಮುಖಂಡರಿಂದ ವಿವರಣೆ ಕೂಡ ಕೇಳಿತ್ತು.