ಮೋತಿಹಾರ್,ಅ.22 (DaijiworldNews/HR): ಜಮ್ಮು ಕಾಶ್ಮೀರದಲ್ಲಿ ಸಂವಿಧಾನ ವಿಧಿ 370ನ್ನು ನಿಷೇಧಿಸಿರುವುದನ್ನು ವಿರೋಧಿಸಿ ಅದನ್ನು ಮರುಸ್ಥಾಪಿಸಲು ಕಾಂಗ್ರೆಸ್ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಹೇಳಿದ್ದಾರೆ.
ಈ ಕುರಿತು ಬಿಹಾರ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಮಾವೋವಾದಿ ಪಕ್ಷ ಸಿಪಿಎಂಎಲ್ ಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದ್ದು, ಆ ಪಕ್ಷ ಅಪಾಯಕಾರಿಯಾಗಿದ್ದು ವಿಭಜನೆ ನೀತಿಯನ್ನು ಹೊಂದಿದೆ ಎಂದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾಕಿಸ್ತಾನ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ನೀಡಿದ್ದ ಹೇಳಿಕೆ ಆಧರಿಸಿ ಪ್ರಶ್ನಿಸಿತು ಎಂದು ನಡ್ಡಾ ಆಕ್ಷೇಪ ವ್ಯಕ್ತಪಡಿಸಿ, ಮಾಜಿ ಸಚಿವ ಪಿ ಚಿದಂಬರಂ ಸಂವಿಧಾನ ವಿಧಿ 370ನ್ನು ಪುನರ್ ಸ್ಥಾಪಿಸಬೇಕೆಂದು ಒತ್ತಾಯಿಸಿದ್ದಕ್ಕೆ ಕೂಡ ವಾಗ್ದಾಳಿ ನಡೆಸಿದ್ದಾರೆ.
ಇನ್ನು ರಾಹುಲ್ ಗಾಂಧಿ ಮತ್ತು ಸಂಸದ ಶಶಿ ತರೂರ್ ಅವರು ಕೊರೊನಾವನ್ನು ನಿಯಂತ್ರಿಸುವಲ್ಲಿ ಪಾಕಿಸ್ತಾನ ಮುಂದಿದೆ ಎಂದು ಹೇಳಿದನ್ನು ಪ್ರಶ್ನಿಸಿದ ನಡ್ಡಾ, ದೇಶದ ಬಗ್ಗೆ ಅವರಿಬ್ಬರ ಮನಸ್ಥಿತಿ ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.