ಹೈದರಾಬಾದ್, ಅ.22 (DaijiworldNews/HR): ತೆಲಂಗಾಣದ ಮಾಜಿ ಗೃಹ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ನಾಯಿನಿ ನರಸಿಂಹ ರೆಡ್ಡಿ(86) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ರೆಡ್ಡಿಯವರು ಇತ್ತೀಚೆಗೆ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಬಳಿಕ ಆರೋಗ್ಯ ಹದಗೆಟ್ಟ ಕಾರಣ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ನಿಧನರಾಗಿದ್ದಾರೆ.
ರೆಡ್ಡಿ ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಸ್ಥಾಪಕ ನಾಯಕರಾಗಿದ್ದರು. 2014 ಹಾಗೂ 2018ರ ನಡುವೆ ಹೊಸ ರಾಜ್ಯದ ಮೊದಲ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ರೆಡ್ಡಿ ನಿಧನಕ್ಕೆ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಸಂತಾಪ ಸೂಚಿಸಿದ್ದಾರೆ.